Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:15 - ಕನ್ನಡ ಸತ್ಯವೇದವು C.L. Bible (BSI)

15 ‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:15
16 ತಿಳಿವುಗಳ ಹೋಲಿಕೆ  

ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.


ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ನೀನು ಸಜ್ಜನನಾಗಿದ್ದರೆ ಅದರಿಂದ ಸರ್ವಶಕ್ತನಿಗೆ ಸುಖವೇ? ನಿನ್ನ ನಿರ್ದೋಷ ನಡತೆಯಿಂದ ಆತನಿಗೆ ಲಾಭವೇ?


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು