Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:19 - ಕನ್ನಡ ಸತ್ಯವೇದವು C.L. Bible (BSI)

19 ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ದುಷ್ಟನ ಪಾಪಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ [ಅನ್ನುತ್ತೀರೋ?] ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೇನೆ ಕೊಟ್ಟುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:19
23 ತಿಳಿವುಗಳ ಹೋಲಿಕೆ  

ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


“ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್‍ ನಾಡನ್ನು ಕುರಿತು ಹೇಳುವುದೇಕೆ?


ಆ ಕಾಲ ಬಂದಾಗ ಜನರು, ‘ಹೆತ್ತವರು ಹುಳಿದ್ರಾಕ್ಷೆಯನ್ನು ತಿಂದರು. ಆದರೆ ಮಕ್ಕಳ ಹಲ್ಲುಗಳು ಚಳಿತುಹೋದವು’ ಎಂದು ಹೇಳರು.


ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ


ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II


“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು