Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:20 - ಕನ್ನಡ ಸತ್ಯವೇದವು C.L. Bible (BSI)

20 ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನ ರೌದ್ರರಸವನ್ನು ಪಾನಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:20
16 ತಿಳಿವುಗಳ ಹೋಲಿಕೆ  

ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


ನೀವು ಅವರಿಗೆ ಹೀಗೆ ಹೇಳಬೇಕು: ‘ಸರ್ವೇಶ್ವರ ಹೇಳುವುದೇನೆಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಆಡಿಕೊಂಡ ಪ್ರಕಾರವೇ ನಾನು ಮಾಡುತ್ತೇನೆ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಏಕೆಂದರೆ ಸಾಯತಕ್ಕವನು ತನ್ನ ಸ್ವಂತ ದೋಷಕ್ಕಾಗಿಯೇ ಸಾಯುವನು. ಹುಳಿದ್ರಾಕ್ಷೆಯನ್ನು ತಿಂದವನ ಹಲ್ಲೇ ಚಳಿತುಹೋಗುವುದು.”


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು