Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:25 - ಕನ್ನಡ ಸತ್ಯವೇದವು C.L. Bible (BSI)

25 ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು. ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:25
14 ತಿಳಿವುಗಳ ಹೋಲಿಕೆ  

ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.


“ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು:


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ನನಗೆ ಉಸಿರಾಡಲೂ ಬಿಡದೆ ನನ್ನ ಹೊಟ್ಟೆಯನ್ನು ಕಹಿಯಾದವುಗಳಿಂದ ತುಂಬಿಸುತ್ತಾನೆ.


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.


ಅವನ ದೇಹ ಬೆಳೆದು ಕೊಬ್ಬೇರಿರುತ್ತದೆ ಅವನ ಅಸ್ತಿಗಳ ಮಜ್ಜೆ ಸಾರವತ್ತಾಗಿರುತ್ತದೆ.


ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು