Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:3 - ಕನ್ನಡ ಸತ್ಯವೇದವು C.L. Bible (BSI)

3 ನಾನು ಮಾತಾಡುವಾಗ ತಾಳ್ಮೆಯಿಂದಿರಿ ಬಳಿಕ ಬೇಕಾದರೆ ಪರಿಹಾಸ್ಯ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಾಳಿರಿ, ನಾನೂ ಮಾತಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಮಾತಾಡುವಾಗ ತಾಳ್ಮೆಯಿಂದಿರಿ. ನಾನು ಮಾತಾಡಿದ ಮೇಲೆ ನೀವು ನನ್ನನ್ನು ಗೇಲಿ ಮಾಡಿದರೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಮಾತನಾಡುವಾಗ, ನನ್ನನ್ನು ಸಹಿಸಿಕೊಳ್ಳಿರಿ; ನಾನು ಮಾತನಾಡಿದ ಮೇಲೆ ನೀವು ಪರಿಹಾಸ್ಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:3
10 ತಿಳಿವುಗಳ ಹೋಲಿಕೆ  

ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ.


ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.


ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?


ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?


“ಗಮನಕೊಡಿ ನನ್ನ ಮಾತುಗಳಿಗೆ ನಾನು ನಿಮ್ಮಿಂದ ಬಯಸುವ ಉಪಶಮನ ಇದುವೆ:


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು