Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:30 - ಕನ್ನಡ ಸತ್ಯವೇದವು C.L. Bible (BSI)

30 ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:30
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”


ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ದಾರಿಹೋಕರನ್ನು ನೀವು ವಿಚಾರಿಸಿಲ್ಲವೆ? ಅವರು ಕೊಟ್ಟ ದೃಷ್ಟಾಂತ ನಿಮಗೆ ಹಿಡಿಸಲಿಲ್ಲವೆ?


ಅವನಿಗೆ ‘ನೀನು ದುರ್ಮಾರ್ಗಿ’ ಎಂದು ಮುಖಾಮುಖಿಯಾಗಿ ಹೇಳಿದವರಾರು? ಅವನು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿತೀರಿಸುವವರಾರು?


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.


ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.


ಆಗ ಯೆಹೋಶುವನು ಅವರಿಗೆ, “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕೆಲವರನ್ನಿಡಿ. ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದಾದ ವ್ಯಕ್ತಿಗಳನ್ನು ಹತಮಾಡುತ್ತಾ ಹೋಗಿ.


ಇತರರಂತೆ ಅವರಿಗೆ ಸಂಕಟವಿಲ್ಲವಲ್ಲಾ! I ರೋಗರುಜೆ ಅವರಿಗಂಟುವುದಿಲ್ಲವಲ್ಲಾ! II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು