Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:31 - ಕನ್ನಡ ಸತ್ಯವೇದವು C.L. Bible (BSI)

31 ಅವನಿಗೆ ‘ನೀನು ದುರ್ಮಾರ್ಗಿ’ ಎಂದು ಮುಖಾಮುಖಿಯಾಗಿ ಹೇಳಿದವರಾರು? ಅವನು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿತೀರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನ ಮುಯ್ಯಿಗೆ ಮುಯ್ಯಿ ತೀರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು? ಅವರು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿ ತೀರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:31
15 ತಿಳಿವುಗಳ ಹೋಲಿಕೆ  

ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.


ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಮೆರವಣಿಗೆಯಾಗಿ ಅವನನ್ನು ಸಮಾಧಿಗೆ ಒಯ್ಯುತ್ತಾರೆ ಅವನ ಗೋರಿಗೆ ಕಾವಲು ಕೂಡ ಇಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು