Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:11 - ಕನ್ನಡ ಸತ್ಯವೇದವು C.L. Bible (BSI)

11 ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಮುಂಗಾಣದ ಕತ್ತಲೂ ಜಲಪ್ರವಾಹವೂ ನಿನ್ನನ್ನು ಆವರಿಸಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:11
17 ತಿಳಿವುಗಳ ಹೋಲಿಕೆ  

ಪ್ರವಾಹವು ನನ್ನನ್ನು ಮುಳುಗಿಸಿತು; ಆಗ ಸತ್ತೆ ಎಂದುಕೊಂಡೆ ನಾನು.


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ನಿನ್ನಾಜ್ಞೆ ಮೋಡ ಮುಟ್ಟಿದ ಮಾತ್ರಕೆ ಹೇರಳವಾದ ನೀರು ನಿನ್ನನು ಆವರಿಸುವುದೊ?


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


“ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು