Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:13 - ಕನ್ನಡ ಸತ್ಯವೇದವು C.L. Bible (BSI)

13 ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:13
15 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು