Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:16 - ಕನ್ನಡ ಸತ್ಯವೇದವು C.L. Bible (BSI)

16 ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:16
19 ತಿಳಿವುಗಳ ಹೋಲಿಕೆ  

ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ.


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.


ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.


ಎಂತಲೆ ನಾನು : “ಅರ್ಧಾಯುಷ್ಯದಲೆ ನನ್ನೊಯ್ಯಬೇಡ ದೇವಾ I ತಲತಲಾಂತರದವರೆಗೂ ನಿನ್ನ ವರುಷಗಳು ಉಳಿದಿವೆಯಲ್ಲಾ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


“ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.


ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ಯೌವನ ಪ್ರಾಯದಲ್ಲೇ ಸಾಯುವರು ಪುರುಷಗಾಮಿಗಳ ಮಧ್ಯೆಯಲ್ಲೇ ಗತಿಸಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು