Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:17 - ಕನ್ನಡ ಸತ್ಯವೇದವು C.L. Bible (BSI)

17 ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನನ್ನು ಕುರಿತು, ನಮ್ಮಿಂದ ತೊಲಗಿಹೋಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:17
9 ತಿಳಿವುಗಳ ಹೋಲಿಕೆ  

“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಅವರ ಹೋರಿ ತಪ್ಪದೆ ಫಲವತ್ತಾಗಿಸುತ್ತದೆ ಅವರ ಗೋವು ಕಂದುಹಾಕದೆ ಈಯುತ್ತದೆ.


ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು