Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:21 - ಕನ್ನಡ ಸತ್ಯವೇದವು C.L. Bible (BSI)

21 ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:21
11 ತಿಳಿವುಗಳ ಹೋಲಿಕೆ  

“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು