Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:24 - ಕನ್ನಡ ಸತ್ಯವೇದವು C.L. Bible (BSI)

24 ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ಚಿನ್ನವನ್ನು ದೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:24
14 ತಿಳಿವುಗಳ ಹೋಲಿಕೆ  

ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.


ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.


ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್‍ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು.


ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಓಫೀರ್, ಹವೀಲ, ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲ ಯೋಕ್ತಾನನಿಂದ ಹುಟ್ಟಿದವು.


ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.


ಸರ್ವಶಕ್ತನಾದ ಸ್ವಾಮಿಯೇ ನಿನಗೆ ಬಂಗಾರವಾಗಿರಲಿ ಆತನೇ ನಿನಗೆ ಬೆಳ್ಳಿಯ ರಾಶಿಯಾಗಿರಲಿ.


ಬಂಗಾರದಲಿ ನಾನು ಭರವಸೆಯಿಟ್ಟಿದ್ದರೆ ಅಪರಂಜಿಯನೇ ನಾನು ನೆಚ್ಚಿಕೊಂಡಿದ್ದರೆ,


ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು