Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:25 - ಕನ್ನಡ ಸತ್ಯವೇದವು C.L. Bible (BSI)

25 ಸರ್ವಶಕ್ತನಾದ ಸ್ವಾಮಿಯೇ ನಿನಗೆ ಬಂಗಾರವಾಗಿರಲಿ ಆತನೇ ನಿನಗೆ ಬೆಳ್ಳಿಯ ರಾಶಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸರ್ವಶಕ್ತನು ನಿನಗೆ ಚಿನ್ನವಾಗಿಯೂ ಬೆಳ್ಳಿಯ ರಾಶಿಗಳಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಸರ್ವಶಕ್ತನಾದ ದೇವರು ನಿನ್ನ ಪಾಲಿಗೆ ಬಂಗಾರವಾಗಿಯೂ ಬೆಳ್ಳಿಯ ರಾಶಿಗಳಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸರ್ವಶಕ್ತರು ನಿನಗೆ ಬಂಗಾರವಾಗಿರುವರು. ದೇವರು ನಿನಗೆ ಸಮೃದ್ಧಿಯಾದ ಬೆಳ್ಳಿಯೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:25
13 ತಿಳಿವುಗಳ ಹೋಲಿಕೆ  

ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ.


ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು