Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:26 - ಕನ್ನಡ ಸತ್ಯವೇದವು C.L. Bible (BSI)

26 ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ನೀನು ಸರ್ವಶಕ್ತನಲ್ಲಿ ಆನಂದಪಟ್ಟು ದೇವರ ಕಡೆಗೆ ಮುಖವನ್ನು ಎತ್ತಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. ದೇವರ ಕಡೆಗೆ ಕಣ್ಣೆತ್ತಿ ನೋಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:26
16 ತಿಳಿವುಗಳ ಹೋಲಿಕೆ  

ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?


ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


ಎತ್ತಿರುವೆ ಪ್ರಭೂ, ಹೃನ್ಮನಗಳನು ನಿನ್ನತ್ತ I ಇಟ್ಟಿರುವೆ ಭರವಸೆ ನಿನ್ನಲೆ ದೇವಾ ಸನ್ನುತ II


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ಸರ್ವಶಕ್ತನಾದ ಸ್ವಾಮಿಯೇ ನಿನಗೆ ಬಂಗಾರವಾಗಿರಲಿ ಆತನೇ ನಿನಗೆ ಬೆಳ್ಳಿಯ ರಾಶಿಯಾಗಿರಲಿ.


ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು