Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:28 - ಕನ್ನಡ ಸತ್ಯವೇದವು C.L. Bible (BSI)

28 ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾವದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀನು ಏನಾದರೂ ನಿರ್ಣಯಿಸಿದ್ದರೆ, ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:28
15 ತಿಳಿವುಗಳ ಹೋಲಿಕೆ  

ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು