Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:29 - ಕನ್ನಡ ಸತ್ಯವೇದವು C.L. Bible (BSI)

29 ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ ಮೇಲಕ್ಕೆತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, ದೇವರು ಬಿದ್ದವರನ್ನು ರಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:29
17 ತಿಳಿವುಗಳ ಹೋಲಿಕೆ  

ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.


ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು