Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:30 - ಕನ್ನಡ ಸತ್ಯವೇದವು C.L. Bible (BSI)

30 ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿರ್ದೋಷಿಯಲ್ಲದವನನ್ನೂ ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿರಪರಾಧಿಗಳನ್ನು ರಕ್ಷಿಸುವನು. ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:30
17 ತಿಳಿವುಗಳ ಹೋಲಿಕೆ  

ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ:


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II


ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು