Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:7 - ಕನ್ನಡ ಸತ್ಯವೇದವು C.L. Bible (BSI)

7 ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಳಲಿದವನಿಗೆ ನೀರು ಕೊಡದೆ ಹಸಿದವನಿಗೆ ಅನ್ನವಿಕ್ಕದೆ ಹೋಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಯಾಸಗೊಂಡವರಿಗೆ ನೀರು ಕೊಡದೆ ಹಸಿದವರಿಗೆ ಊಟ ಕೊಡದೆಹೋಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ದಣಿದವರಿಗೆ ನೀರು ಕೊಡಲಿಲ್ಲ; ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:7
13 ತಿಳಿವುಗಳ ಹೋಲಿಕೆ  

ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?


ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು