ಯೋಬ 23:10 - ಕನ್ನಡ ಸತ್ಯವೇದವು C.L. Bible (BSI)10 ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು. ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;