Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:11 - ಕನ್ನಡ ಸತ್ಯವೇದವು C.L. Bible (BSI)

11 ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನ ಮಾರ್ಗದಲ್ಲೇ ನಾನು ನಡೆದಿದ್ದೇನೆ. ನಾನು ಓರೆಯಾಗದೆ ಆತನ ಮಾರ್ಗವನ್ನೇ ಅನುಸರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:11
21 ತಿಳಿವುಗಳ ಹೋಲಿಕೆ  

ನಮ್ಮಂತರಂಗ ದೂರವಾಗಿಲ್ಲ ನಿನ್ನಿಂದ I ನಾವು ಅಗಲಲಿಲ್ಲ ನೀನು ತೋರಿದ ಮಾರ್ಗದಿಂದ II


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?


ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,


ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು