Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:13 - ಕನ್ನಡ ಸತ್ಯವೇದವು C.L. Bible (BSI)

13 ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:13
21 ತಿಳಿವುಗಳ ಹೋಲಿಕೆ  

ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.


ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ಸೊಟ್ಟವಾದುದನ್ನು ನೆಟ್ಟಗೆ ಮಾಡುವುದು ಅಸಾಧ್ಯ, ಇಲ್ಲವಾದುದನ್ನು ಲೆಕ್ಕ ಹಾಕುವುದು ಅಶಕ್ಯ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


“ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಆತ ಹಾದುಹೋದರೂ ಸೆರೆಹಿಡಿದರೂ ನ್ಯಾಯಾಲಯಕ್ಕೆ ಎಳೆದರೂ ತಡೆವರಾರು?


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು