Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:15 - ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ನಾನು ಆತನ ಸನ್ನಿಧಿಗೆ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಅಂಜುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:15
8 ತಿಳಿವುಗಳ ಹೋಲಿಕೆ  

ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!


ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ದೇವರೇ ನನ್ನ ಶಕ್ತಿಯನು ಕುಂದಿಸಿಹನು ಸರ್ವಶಕ್ತ ನನ್ನನು ಆತಂಕಗೊಳಿಸಿಹನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು