Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:3 - ಕನ್ನಡ ಸತ್ಯವೇದವು C.L. Bible (BSI)

3 ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಹಾ, ದೇವರ ದರ್ಶನವು ನನಗೆ ಎಲ್ಲಿ ಆಗುವುದು? ಆತನ ಬಳಿಗೆ ನಾನು ಹೇಗೆ ಹೋಗಬೇಕು? ನನಗೆ ಗೊತ್ತಾಗಿದ್ದರೆ ಎಷ್ಟೋ ಮೇಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:3
13 ತಿಳಿವುಗಳ ಹೋಲಿಕೆ  

ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು