Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಬಾಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು ದೇವರಿಗೆ ನನ್ನ ವ್ಯಾಜ್ಯದ ಬಗ್ಗೆ ವಿವರಿಸುತ್ತಿದ್ದೆನು; ನಾನು ನಿರಪರಾಧಿಯೆಂದು ನಿರೂಪಿಸಲು ನನ್ನ ಬಾಯನ್ನು ವಾದಗಳಿಂದ ತುಂಬಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:4
15 ತಿಳಿವುಗಳ ಹೋಲಿಕೆ  

ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.


ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!


ಆತನ ಹೇಳಿಕೆಗಳನ್ನು ವಿವೇಚಿಸಬಹುದಿತ್ತು ಆತನ ಪ್ರತ್ಯುತ್ತರಗಳನ್ನು ತಿಳಿದುಕೊಳ್ಳಬಹುದಾಗಿತ್ತು.


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು