Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:12 - ಕನ್ನಡ ಸತ್ಯವೇದವು C.L. Bible (BSI)

12 ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:12
23 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಅಕಸ್ಮಾತ್ತಾಗಿ ಮಹಾವಿನಾಶ ಬಂದೊದಗಿದರೂ ನಿರ್ದೋಷಿಗಳ ಅವಸ್ಥೆ ಕಂಡು ಹಾಸ್ಯಮಾಡುತ್ತಾನೆ.


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ದಾಹಗೊಂಡೇ ದ್ರಾಕ್ಷಿಯನ್ನು ತುಳಿಯುತ್ತಾರೆ ತೊಟ್ಟಿಗಳಲ್ಲಿ ಎಣ್ಣೆಗಾಣವನ್ನು ಆಡಿಸುತ್ತಾರೆ ಕೋಟೆಗಳಲ್ಲಿ.


ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ದುರುಳನು ನಿನ್ನನಲಕ್ಷ್ಯ ಮಾಡುವುದೆಂತು? I “ದೇವನೆನ್ನ ವಿಚಾರಿಸನು” ಎನ್ನುವುದೆಂತು? II


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು