Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:2 - ಕನ್ನಡ ಸತ್ಯವೇದವು C.L. Bible (BSI)

2 ಎಲ್ಲೆ ಮೇರೆಗಳನ್ನು ಸರಿಸಿಕೊಳ್ಳುವವರುಂಟು ಅಪಹರಿಸಿಕೊಂಡ ದನಕುರಿಗಳನ್ನು ಸಾಕಿಕೊಳ್ಳುವವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೇರೆಗಳನ್ನು ಸರಿಸಿಕೊಳ್ಳುವವರುಂಟು, ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:2
10 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.


ಪುರಾತನ ಎಲ್ಲೆ ಗುರುತನ್ನು ಒತ್ತರಿಸಬೇಡ; ಅನಾಥರ ಹೊಲಗದ್ದೆಯನ್ನು ಆಕ್ರಮಿಸಬೇಡ.


“ಅವರು, ‘ಮತ್ತೊಬ್ಬನ ಗಡಿಮೇರೆಯನ್ನು ಸರಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ನಿನ್ನ ಪೂರ್ವಜರು ಹಾಕಿರುವ ಎಲ್ಲೆ ಗುರುತನ್ನು, ಸ್ಥಳಾಂತರಿಸಬೇಡ ನೀನು.


“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.


ಹಸಿದವರು ಅವನ ಬೆಳೆಯನು ತಿಂದುಬಿಡುವರು ಮುಳ್ಳುಬೇಲಿ ಹಾಕಿದ್ದರೂ ಅದನು ತಿಂದುಬಿಡುವರು ಅವನ ಸೊತ್ತನು ನುಂಗಲು ಬಾಯ್ದೆರೆದು ಕಾದಿರುವರು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.


ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.


ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು