ಯೋಬ 24:20 - ಕನ್ನಡ ಸತ್ಯವೇದವು C.L. Bible (BSI)20 ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವದು; ಹುಳವು ಅವನ ಹೆಣವನ್ನು ರುಚಿಯಿಂದ ತಿನ್ನುವದು; ಇನ್ನು ಮೇಲೆ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು. ಅಧ್ಯಾಯವನ್ನು ನೋಡಿ |