Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:23 - ಕನ್ನಡ ಸತ್ಯವೇದವು C.L. Bible (BSI)

23 ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:23
25 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.


ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು