Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:24 - ಕನ್ನಡ ಸತ್ಯವೇದವು C.L. Bible (BSI)

24 ಅವರು ಮೇಲೇರಿ ಮಾಯವಾಗುತ್ತಾರೆ ಕೊಂಚಕಾಲದ ಮೇಲೆ ಕೊಯ್ಯಲ್ಪಡುತ್ತಾರೆ ಸುಗ್ಗಿಯ ತೆನೆಗಳಂತೆ ಕೂಡಿಸಲ್ಪಡುತ್ತಾರೆ ಕೆಳಗೆ ಬಿದ್ದ ಕಾಳಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದುಷ್ಟರು ಸ್ವಲ್ಪಕಾಲ ಅಭಿವೃದ್ಧಿಗೊಂಡರೂ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಎಲ್ಲರಂತೆ ಇಲ್ಲವಾಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:24
13 ತಿಳಿವುಗಳ ಹೋಲಿಕೆ  

ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.


ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”


ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.


ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು