Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:4 - ಕನ್ನಡ ಸತ್ಯವೇದವು C.L. Bible (BSI)

4 ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿರ್ಗತಿಕರನ್ನು ಸ್ಥಳದಿಂದ ಸ್ಥಳಕ್ಕೆ ಅಲೆದಾಡಿಸುವರು. ಬಡವರು ಈ ದುಷ್ಟರಿಗೆ ಹೆದರಿ ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:4
22 ತಿಳಿವುಗಳ ಹೋಲಿಕೆ  

ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.


ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.


ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಕಷ್ಟಾನುಭವಿಯನು ಕಂಡು ನಾನು ಕಣ್ಣೀರಿಡಲಿಲ್ಲವೆ? ದಟ್ಟದರಿದ್ರರಿಗೋಸ್ಕರ ನಾನು ದುಃಖಪಡಲಿಲ್ಲವೆ?


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.


ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ,


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು