Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 25:2 - ಕನ್ನಡ ಸತ್ಯವೇದವು C.L. Bible (BSI)

2 “ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 25:2
27 ತಿಳಿವುಗಳ ಹೋಲಿಕೆ  

ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.


ಬಳಿಕ ಶೂಹ್ಯನಾದ ಬಿಲ್ದದನು ಹೀಗೆಂದನು:


ಎಂಥ ಪಾಲನ್ನು ವಿಧಿಸಬಲ್ಲನು ದೇವರು ಮೇಲಣಲೋಕದಿಂದ? ಎಂಥ ಬಾಧ್ಯತೆಯನು ನೀಡಬಲ್ಲನು ಸರ್ವಶಕ್ತನು ಮಹೋನ್ನತದಿಂದ?


ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.


ದೇವರ ಶಕ್ತಿ ಉನ್ನತೋನ್ನತ ಯಾರಿಹನು ಅವನಂಥ ಬೋಧಕ?


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು