Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 25:6 - ಕನ್ನಡ ಸತ್ಯವೇದವು C.L. Bible (BSI)

6 ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟುಮಾತ್ರದವನು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವಲ್ಲಿ ನರಹುಳವು ಎಷ್ಟೋ ಅಶುದ್ಧವು! ನರಕ್ರಿವಿುಯು ಎಷ್ಟೋ ಅಪವಿತ್ರವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 25:6
7 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ಸಮಾಧಿಯನ್ನೇ ‘ನನ್ನ ತಂದೆ’ ಎಂದು ಕರೆದೆನಾದರೆ ಹುಳುವನ್ನೇ ‘ನನ್ನ ತಾಯಿ, ನನ್ನ ತಂಗಿ’ ಎಂದೆನಾದರೆ.


ಆಗ ಯೋಬನು ಹೀಗೆ ಉತ್ತರಕೊಟ್ಟನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು