Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:6 - ಕನ್ನಡ ಸತ್ಯವೇದವು C.L. Bible (BSI)

6 ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಾತಾಳವು ಆತನ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರಿಗೆ ಪಾತಾಳವೂ ಸ್ಪಷ್ಟವಾಗಿ ಕಾಣುತ್ತದೆ; ಮರಣವು ಆತನಿಗೆ ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:6
17 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


‘ನಮ್ಮ ಕಿವಿಗೆ ಬಿದ್ದಿದೆ ಅದರ ಸುದ್ದಿ ಮಾತ್ರ’ ಎನ್ನುತ್ತವೆ ಅಧೋಲೋಕ ಹಾಗು ಮೃತ್ಯುಲೋಕ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II


ಮೃತರು ನಿನ್ನದ್ಭುತಗಳನು ಮೆಚ್ಚುವುದುಂಟೆ I ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೆ? II


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ.


ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು.


ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?


ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು