Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:10 - ಕನ್ನಡ ಸತ್ಯವೇದವು C.L. Bible (BSI)

10 ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಸರ್ವಶಕ್ತನಲ್ಲಿ ಆನಂದಪಟ್ಟು ಆತನನ್ನು ಸರ್ವದಾ ಪ್ರಾರ್ಥಿಸುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ಸರ್ವಶಕ್ತನಾದ ದೇವರಲ್ಲಿ ಆನಂದಿಸಬೇಕಿತ್ತು; ಯಾವಾಗಲೂ ಆತನಿಗೆ ಪ್ರಾರ್ಥಿಸಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:10
14 ತಿಳಿವುಗಳ ಹೋಲಿಕೆ  

ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ದೇವರ ಹಸ್ತಬಲವನು ಕುರಿತು ಬೋಧಿಸುವೆನು ಸರ್ವಶಕ್ತನ ಯೋಜನೆಯನು ನಿಮಗೆ ಮರೆಮಾಚೆನು.


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು