Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:13 - ಕನ್ನಡ ಸತ್ಯವೇದವು C.L. Bible (BSI)

13 “ಹೀಗಿರುತ್ತವೆ ದುಷ್ಟನಿಗೆ ದೇವರಿಂದ ದೊರಕುವ ಪಾಲು ಹಿಂಸಾಚಾರಿಗೆ ಸರ್ವಶಕ್ತನಿಂದ ಸಿಗುವ ಸೊತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ಹಿಂಸಕನಿಗೆ ಸರ್ವಶಕ್ತನಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುವದು: -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ದೇವರು ದುಷ್ಟರಿಗೋಸ್ಕರ ಮಾಡಿರುವ ಯೋಜನೆಯೂ ಸರ್ವಶಕ್ತನಾದ ದೇವರಿಂದ ಹಿಂಸಕನಿಗೆ ದೊರೆಯುವ ಸ್ವಾಸ್ತ್ಯವೂ ಹೀಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:13
13 ತಿಳಿವುಗಳ ಹೋಲಿಕೆ  

ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ಎಂಥ ಪಾಲನ್ನು ವಿಧಿಸಬಲ್ಲನು ದೇವರು ಮೇಲಣಲೋಕದಿಂದ? ಎಂಥ ಬಾಧ್ಯತೆಯನು ನೀಡಬಲ್ಲನು ಸರ್ವಶಕ್ತನು ಮಹೋನ್ನತದಿಂದ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು