Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:16 - ಕನ್ನಡ ಸತ್ಯವೇದವು C.L. Bible (BSI)

16 ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಬೆಳ್ಳಿಯನ್ನು ದೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:16
15 ತಿಳಿವುಗಳ ಹೋಲಿಕೆ  

ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿಹತ್ತಿದೆ.


ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.


ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.


ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.


ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.


ಅವನ ಮನೆಯವರಲ್ಲಿ ಉಳಿದವರು ಗುಳಿಸೇರುವರು ವ್ಯಾಧಿಯಿಂದ ಅವನ ವಿಧವೆಯರು ಅವನಿಗೆ ನೆರವಾಗುವರು ಉತ್ತರಕ್ರಿಯೆಗಳಿಂದ.


ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.


ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು