Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:17 - ಕನ್ನಡ ಸತ್ಯವೇದವು C.L. Bible (BSI)

17 ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಬಟ್ಟೆಗಳನ್ನು ನೀತಿವಂತರು ಧರಿಸಿಕೊಳ್ಳುವರು; ಅವನ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:17
10 ತಿಳಿವುಗಳ ಹೋಲಿಕೆ  

ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.


ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.


ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.


ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.


ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.


ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.


ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು