Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:18 - ಕನ್ನಡ ಸತ್ಯವೇದವು C.L. Bible (BSI)

18 ಜೇಡರ ಹುಳದ ಗೂಡಿನಂತೆ ಕಾವಲುಗಾರನ ಗುಡಿಸಿಲಂತೆ ಬಡಕಲಾಗುವುದು ಅವನು ಕಟ್ಟಿಕೊಂಡ ಮನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಕಟ್ಟಿಕೊಂಡ ಮನೆಯು ಜಾಡಹುಳದ ಗೂಡಿನಂತೆಯೂ ಕಾವಲುಗಾರನು ಹಾಕಿಕೊಂಡ ಮಂಚಿಕೆಯಂತೆಯೂ ದುರ್ಬಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:18
6 ತಿಳಿವುಗಳ ಹೋಲಿಕೆ  

ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”


ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು