Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:19 - ಕನ್ನಡ ಸತ್ಯವೇದವು C.L. Bible (BSI)

19 ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದುಷ್ಟನು ಮಲಗಿಕೊಳ್ಳುವಾಗ ಐಶ್ವರ್ಯವಂತನಾಗಿದ್ದರೂ ನಿದ್ರೆಯಿಂದ ಎಚ್ಚೆತ್ತಾಗ ಅವನ ಐಶ್ವರ್ಯವೆಲ್ಲಾ ಹೊರಟುಹೋಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:19
19 ತಿಳಿವುಗಳ ಹೋಲಿಕೆ  

ಅವರು ಮೇಲೇರಿ ಮಾಯವಾಗುತ್ತಾರೆ ಕೊಂಚಕಾಲದ ಮೇಲೆ ಕೊಯ್ಯಲ್ಪಡುತ್ತಾರೆ ಸುಗ್ಗಿಯ ತೆನೆಗಳಂತೆ ಕೂಡಿಸಲ್ಪಡುತ್ತಾರೆ ಕೆಳಗೆ ಬಿದ್ದ ಕಾಳಿನಂತೆ.


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”


ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು