Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:20 - ಕನ್ನಡ ಸತ್ಯವೇದವು C.L. Bible (BSI)

20 ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:20
17 ತಿಳಿವುಗಳ ಹೋಲಿಕೆ  

ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II


ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


“ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.


ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II


ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು