Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:22 - ಕನ್ನಡ ಸತ್ಯವೇದವು C.L. Bible (BSI)

22 ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರು ಕರುಣವಿಲ್ಲದೆ ಅವನ ಮೇಲೆ [ತನ್ನ ಬಾಣಗಳನ್ನು] ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇಬೇಕೆಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:22
21 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು