Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:23 - ಕನ್ನಡ ಸತ್ಯವೇದವು C.L. Bible (BSI)

23 ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀ ಹಾಕಿ ಆಚೆಗೆ ಹೊರಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:23
15 ತಿಳಿವುಗಳ ಹೋಲಿಕೆ  

ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.


ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು