Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ತುಟಿಗಳು ಅನ್ಯಾಯವನ್ನು ನುಡಿಯುವದೇ ಇಲ್ಲ, ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ತುಟಿಗಳು ಕೆಟ್ಟ ಮಾತುಗಳನ್ನು ಆಡುವುದಿಲ್ಲ; ನನ್ನ ನಾಲಿಗೆಯು ಸುಳ್ಳಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:4
8 ತಿಳಿವುಗಳ ಹೋಲಿಕೆ  

ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?


ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’


ಈಗ ದಯವಿಟ್ಟು ನೋಡಿ ನನ್ನ ಕಡೆಗೆ ಸುಳ್ಳಾಡೆನು ನಿಮ್ಮ ಮುಖದೆದುರಿಗೆ.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು