Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:5 - ಕನ್ನಡ ಸತ್ಯವೇದವು C.L. Bible (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:5
17 ತಿಳಿವುಗಳ ಹೋಲಿಕೆ  

ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.


ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.


ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


ಯೋಬನ ಆ ಮೂವರು ಮಿತ್ರರ ಮೇಲೂ ಅವನು ಕೋಪಗೊಂಡನು. ಏಕೆಂದರೆ ಯೋಬನಿಗೆ ತಕ್ಕ ಉತ್ತರ ಕೊಡಲಾಗದೆ ದೇವರನ್ನೇ ತಪ್ಪಿತಸ್ಥರನ್ನಾಗಿಸಿದ್ದರು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.


ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.


ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು