ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!