Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:8 - ಕನ್ನಡ ಸತ್ಯವೇದವು C.L. Bible (BSI)

8 ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:8
19 ತಿಳಿವುಗಳ ಹೋಲಿಕೆ  

ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.


ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ದುರುಳರ ಸಂಘವದು ಬರಡಾದುದು ಸುಡುವುದು ಬೆಂಕಿ ಲಂಚಕೋರರ ಗುಡಾರವನು.


ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.


ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ನೀವು ಹಿಂದಿರುಗಿ ಬಂದು ಸರ್ವೇಶ್ವರನ ಮುಂದೆ ಗೋಳಾಡಿದಿರಿ. ಆಗ ಅವರು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ನಿಮ್ಮನ್ನು ರಕ್ಷಿಸಲೂ ಇಲ್ಲ.


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ನನ್ನ ಹಗೆಗೆ ದುಷ್ಟತನ ಗತಿಯಾಗಲಿ ಅನೀತಿವಂತನ ಪಾಡು ನನ್ನ ವಿರೋಧಿಗೆ ಒದಗಲಿ.


ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು