Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:23 - ಕನ್ನಡ ಸತ್ಯವೇದವು C.L. Bible (BSI)

23 ಸುಜ್ಞಾನದ ಮಾರ್ಗ ಬಲ್ಲವನು ದೇವರೇ ಅದರ ಸ್ಥಳಗೊತ್ತಿದೆ ಆತನೊಬ್ಬನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಜ್ಞಾನದ ಮಾರ್ಗವನ್ನು ತಿಳಿದಿರುವವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:23
15 ತಿಳಿವುಗಳ ಹೋಲಿಕೆ  

ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಆದರೆ ಸುಜ್ಞಾನ ಸಿಕ್ಕುವುದೆಲ್ಲಿ? ವಿವೇಕ ವಾಸಮಾಡುವುದೆಲ್ಲಿ?


ಇಂತಿರಲು ಸುಜ್ಞಾನ ಬರುವುದು ಎಲ್ಲಿಂದ? ವಿವೇಕ ದೊರಕುವುದು ಯಾವ ಸ್ಥಳದಿಂದ?


ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು