Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:24 - ಕನ್ನಡ ಸತ್ಯವೇದವು C.L. Bible (BSI)

24 ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನೊಬ್ಬನೇ ಭೂವಿುಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ ಆಕಾಶದ ಕೆಳಗಿರುವ ಪ್ರತಿಯೊಂದನ್ನೂ ನೋಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:24
15 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?


ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.


‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?


ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ!


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು