Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:28 - ಕನ್ನಡ ಸತ್ಯವೇದವು C.L. Bible (BSI)

28 ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:28
25 ತಿಳಿವುಗಳ ಹೋಲಿಕೆ  

ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಆದುದರಿಂದ ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೆಯಿಸಿದನು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಆದರೆ ಸುಜ್ಞಾನ ಸಿಕ್ಕುವುದೆಲ್ಲಿ? ವಿವೇಕ ವಾಸಮಾಡುವುದೆಲ್ಲಿ?


ಇಂತಿರಲು ಸುಜ್ಞಾನ ಬರುವುದು ಎಲ್ಲಿಂದ? ವಿವೇಕ ದೊರಕುವುದು ಯಾವ ಸ್ಥಳದಿಂದ?


ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು